ಕುತ್ಲೂರು: ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಿ ಇದರ ತ್ರೈಮಾಸಿಕ ಸಭೆ

0

ಕುತ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಿ ಇದರ ತ್ರೈಮಾಸಿಕ ಸಭೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಿರ್ಗತಿಕರಿಗೆ ನೀಡುವ ಮಾಶಾಸನದ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಕುತ್ಲೂರು ಮಂಜುಶ್ರೀ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ನಾರಾವಿ ವಲಯ ಮೇಲ್ವಿಚಾರಕಿ ದಮಯಂತಿಯವರು ಮಾಶಾಸನ ಫಲಾನುಭವಿ ಲೋಕಮ್ಮರವರಿಗೆ ಮಾಶಾಸನದ ಮಂಜೂರಾತಿ ಪತ್ರವನ್ನು ವಿತರಣೆ ಮಾಡಿ ಯೋಜನೆಯು ಕೈಗೊಂಡಿರುವ ಸಮುದಾಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು ಹಾಗೂ ಸ್ವಸಹಾಯ ಸಂಘದ ಸದಸ್ಯರಿಗೆ ಯೋಜನೆಯ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಅಣ್ಣಿ ಎಂ.ಕೆ, ಸೇವಾ ಪ್ರತಿನಿಧಿ ಕೇಶವ ಪೂಜಾರಿ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here