ಜೂ. 15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ- ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಆಯೋಜನೆ

0

ಬಳಂಜ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇದರ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಉಜಿರೆ-ಧರ್ಮಸ್ಥಳ, ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು, ಶ್ರೀಮಾತಾ ನಾಲ್ಕೂರು, ಜ್ಯೋತಿ ಯುವತಿ ಮಂಡಲ ಬಳಂಜ,ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 15ರಿಂದ 21ರ ವರೆಗೆ ಉಚಿತ ಯೋಗ ಶಿಬಿರ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಬಳಂಜದಲ್ಲಿ ನಡೆಯಲಿದೆ.

ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.ಪ್ರತಿದಿನ ಬೆಳಿಗ್ಗೆ ಗಂಟೆ 5.30 ರಿಂದ 6.30 ಯೋಗ ಶಿಬಿರ ನಡೆಯಲಿದೆ. ಯೋಗ ತರಬೇತಿಯನ್ನು ಡಾ.ಅಭಿಷೇಕ್ ಮತ್ತು ಸುಶ್ಮಿತಾ ಶೆಟ್ಟಿ ಉಜಿರೆ ಇವರು ನೀಡಲಿದ್ದಾರೆ.ಹೆಚ್ಚಿನ ಮಾಹಿತಿಗಾಗಿ 9900806088 ನಂಬರನ್ನು ಸಂಪರ್ಕಿಸಬಹುದು ಎಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here