ಬೆಳ್ತಂಗಡಿ: ಉಜಿರೆಯ ಕ್ರೀಡಾ ವಸತಿ ನಿಲಯದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯನ್ನು ಹೈದರಾಬಾದ್ ನ ನಿಜಮಾಬಾದ್‌ನಲ್ಲಿ ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿದ ವರದಿ ಜೂ.18ರಂದು ಬೆಳ್ತಂಗಡಿ ಠಾಣೆಯಲ್ಲಿ ನಡೆದಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸೆಕ್ಟರ್ ಸುಬ್ಬಾಪೂರ್ ಮಠ್ ಅವರ ನೇತೃತ್ವದ ಸಿಬ್ಬಂದಿ ಚರಣ್ ರಾಜ್ ಮತ್ತು ಬಸವರಾಜ್ ವಿದ್ಯಾರ್ಥಿ ನಾಪತ್ತೆ ಬಗ್ಗೆ ಕಾರ್ಯಾಚರಣೆ ನಡೆಸಿ ಹೈದರಾಬಾದ್‌ನ ನಿಜಮಾಬಾದ್‌ನ ಚಿಕ್ಕಪ್ಪನ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ನಕರೆದುಕೊಂಡು ಬಂದು ಪೋಷಕರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ವಿವರ: ಉಜಿರೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಹಾಸನ ಜಿಲ್ಲೆ ಬೇಲೂರಿನ ವಿದ್ಯಾರ್ಥಿನಿ ಮೇ.29 ರಂದು ಬೆಳಗ್ಗೆ 8 ಗಂಟೆ ಸಮಯಕ್ಕೆ ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ವಾರ್ಡನ್ ಬಳಿ ಅನುಮತಿ ಪಡೆದುಕೊಂಡು ಹೋದವರು, ಹಾಸ್ಟೆಲ್‌ಗೂ ವಾಪಸ್ಸು ಬಾರದೇ, ಕಾಲೇಜಿಗೂ ಹೋಗದೇ, ಮನೆಗೂ ಹೋಗದೇ ಕಾಣೆಯಾಗಿದ್ದು, ಕ್ರೀಡಾಂಗಣ, ಕಾಲೇಜು ವಠಾರ, ಪೋಷಕರಲ್ಲಿ ಹಾಗೂ ಆಕೆಯ ಸ್ನೇಹಿತರನ್ನು ಸಂಪರ್ಕಿಸಿದಾಗ ಯಾವುದೇ ಮಾಹಿತಿ ಸಿಗದೇ ಇದ್ದುದರಿಂದ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ಹಾಸ್ಟೆಲ್‌ನಲ್ಲಿ ಇರಲು ಮನಸಿಲ್ಲದೇ ವಿದ್ಯಾರ್ಥಿನಿ ಯಾರಿಗೂ ತಿಳಿಸದೆ ಹೈದರಾಬಾದ್‌ಗೆ ರೈಲಿನ ಮೂಲಕ ಹೋಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.