ನಡ: ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಗೆ ಶ್ರದ್ಧಾಂಜಲಿ ಸಮರ್ಪಣೆ

0

ನಡ: ಸರಕಾರಿ ಪ್ರೌಢಶಾಲೆಯ ಅತ್ಯಂತ ಚುರುಕಿನ, ಸದಾ ನಗುಮೊಗದಿ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಹಸನ್ಮುಖಿಯಾಗಿ, ಶಿಕ್ಷಕರ ನೆಚ್ಚಿನ ವಿದ್ಯಾರ್ಥಿನಿಯಾಗಿದ್ದ ನಮ್ಮ ಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ಕು.ಜಯಲಕ್ಷ್ಮಿ ಜೂ.15ರಂದು ಇಹಲೋಕ ತ್ಯಜಿಸಿದ್ದು, ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿ ಮತ್ತು ಸಹಪಾಠಿ ವಿದ್ಯಾರ್ಥಿಗಳಿಗೆ ಅತೀವ ನೋವಿನ ಸಂಗತಿ.

ಶಾಲೆಯಲ್ಲಿ ಮೃತ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರುತ್ತಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಮೌನ ಪ್ರಾರ್ಥನೆಯ ಮೂಲಕ ಸಂತಾಪವನ್ನು ಸೂಚಿಸಲಾಯಿತು.

LEAVE A REPLY

Please enter your comment!
Please enter your name here