ಬೆಳ್ತಂಗಡಿ: ಅಕ್ರಮವಾಗಿ ಜೂಜಾಟ ಅಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣವನ್ನು ವಶಕ್ಕೆ ಪಡೆದು ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ಜೂ.16ರಂದು ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಚಂದ್ರಶೇಖರ್ ಎ.ಎಮ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಈ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದವರು ಪರಾರಿಯಾಗಲು ಯತ್ನಿಸಿದ್ದು, ಅವರುಗಳನ್ನು ತಡೆದು ಸ್ಥಳವನ್ನು ಪರಿಶೀಲಿಸಿದಾಗ, ಇಸ್ಪೀಟು ಎಲೆಗಳು, ನಗದು 11,730 ರೂಪಾಯಿ ಹಾಗೂ ಇತರ ಸೊತ್ತುಗಳು ಪತ್ತೆಯಾಗಿದ್ದು, ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳಾದ ಬೆಳ್ತಂಗಡಿ ಕಸಬಾ ಗ್ರಾಮದ ಗಣೇಶ್(62ವ), ಕೊಯ್ಯರು ಗ್ರಾಮದ ದಿನೇಶ ಕೆ(42ವ), ಲಾಯಿಲ ಗ್ರಾಮದ ಅಜಯ್(31ವ), ನಡ ಗ್ರಾಮದ ರವಿ ಪ್ರಕಾಶ(52ವ), ಲಾಯಿಲ ಗ್ರಾಮದ ಸುಬ್ರಮಣ್ಯ(34ವ), ಬೆಳ್ತಂಗಡಿ ಕಸಬಾ ಗ್ರಾಮದ ಗಂಗಾಧರ್, ಲಾಯಿಲ ಗ್ರಾಮದ ಸುಬ್ರಮಣ್ಯ ಸೇರಿ ಏಳು ಮಂದಿಯನ್ನು ಬಂಧಿಸಿ ಅವರ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಿಂದ ಅನುಮತಿ ಪಡೆದು ಜೂ.18ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 87 ಕೆಪಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.