ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ “ಮಾಕ್ ಇಂಟರ್ ವ್ಯೂ”

0

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ”ಮಾಕ್ ಇಂಟರ್ ವ್ಯೂ”ವನ್ನು ಆಯೋಜಿಸಲಾಯಿತು.

ಬಯಸಿದ ಉದ್ಯೋಗವನ್ನು ಪಡೆಯುವುದು ಪ್ರತಿಯೊಬ್ಬರ ಕನಸು. ಆದರೆ, ನಿರಂತರವಾಗಿ ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ಹೆಚ್ಚುತ್ತಿರುವ ಸ್ಪರ್ಧಾತ್ಪಕ ಜಗತ್ತಿನಲ್ಲಿ ಉದ್ಯೋಗ ಅವಕಾಶಗಳನ್ನು ಪಡೆಯಬೇಕಾದರೆ ಉತ್ತಮ ಜ್ಞಾನದೊಂದಿಗೆ ಸಂದರ್ಶನವನ್ನು ಎದುರಿಸುವ ಧೈರ್ಯವು ಬೇಕು ಎಂಬ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಮುಂದಿನ ವೃತ್ತಿ ಜೀವನಕ್ಕೆ ತಯಾರಿಸುವ ಹಾಗೂ ಸಂದರ್ಶಗಳನ್ನು ಹೇಗೆ ಎದುರಿಸಬೇಕು ಎಂಬುವುದರ ಅರಿವು ಮೂಡಿಸುವ ಸಲುವಾಗಿ ಜೂ.20ರಂದು ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಮಾಕ್ ಇಂಟರ್ ವ್ಯೂ ಅನ್ನು ಆಯೋಜಿಸಲಾಯಿತು.

ಸೈಂಟ್ ಫಿಲೋಮಿನ ಕಾಲೇಜು ಪುತ್ತೂರು ಇಲ್ಲಿನ ಪ್ರಾಧ್ಯಾಪಕರಾಗಿರುವ ಪ್ರೊ.ಪ್ರಶಾಂತ್ ರೈ ಇವರು ಹಾಗೂ ಎಲ್ ಸಿ ಆರ್ ವಿದ್ಯಾಸಂಸ್ಥೆಯ ಸಂಯೋಜಕ ಯಶವಂತ್ ಜಿ ನಾಯಕ್ ವಿದ್ಯಾರ್ಥಿಗಳಿಗೆ ಸಂದರ್ಶನವನ್ನು ನಡೆಸಿಕೊಟ್ಟರು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ವಿಂದ್ಯಶ್ರೀ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಉಪನ್ಯಾಸಕಿ ರೂಪಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here