ಪೆರಿಂಜೆ: ಶ್ರೀ.ಧ.ಮ. ಅನುದಾನಿತ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

0

ಪೆರಿಂಜೆ: ಶ್ರೀ.ಧ.ಮ.ಅನುದಾನಿತ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಜೂನ್ 21ರಂದು ನಡೆಸಲಾಯಿತು. ಶಾಲಾ ಮುಖ್ಯೋಪಾಧ್ಯ ಮುಕುಂದ ಚಂದ್ರ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಶ್ರೀ.ಧ.ಮ. ಪ್ರಕೃತಿ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಧೃತಿ ಜೈನ್ ಹಾಗು ಶಿಕ್ಷಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಕ್ಷಕ ಜಲಜಾಕ್ಷ ನಾಯಕ್ “ಸ್ವಂತಕ್ಕೆ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಹಿನ್ನಲೆಯಲ್ಲಿ ಯೋಗದ ಉದ್ದೇಶದ ಕುರಿತು ಮಾತನಾಡಿದರು.

ವಿದ್ಯಾರ್ಥಿಗಳು ಹಾಗು ಶಿಕ್ಷಕರು ಉತ್ತಮ ರೀತಿಯಲ್ಲಿ ಯೋಗ ಪ್ರದರ್ಶನ ನಡೆಸಿಕೊಟ್ಟರು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಫಲಹಾರದ ವ್ಯವಸ್ಥೆಯನ್ನು ಮಾಡಲಾಯಿತು.

LEAVE A REPLY

Please enter your comment!
Please enter your name here