ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್.21ರಂದು ಶಾಲಾ ಸಭಾಭವನದಲ್ಲಿ ನೆರವೇರಿಸಲಾಯಿತು.

ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು.

ವಿದ್ಯಾರ್ಥಿ ಮಹಮ್ಮದ್ ಫಾಹೀಝ್ ಯೋಗ ದಿನಾಚರಣೆಯ ಮಹತ್ವದ ಬಗ್ಗೆ ವಿವರಣೆ ನೀಡಿದರು.

ಈ ಕಾರ್ಯಕ್ರಮಕ್ಕೆ ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ನಿರ್ದೇಶಕ ಪ್ರಕಾಶ್ ಡಿ’ಸೋಜ ಆಗಮಿಸಿದ್ದರು.

ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಯೋಗವು ನಮ್ಮ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಬೆಳೆಸಲು ಯೋಗವು ಸಹಾಯ ಮಾಡುತ್ತದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯವನ್ನು ಕೋರಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ವಂ|ಸ್ವಾ| ದೀಪಕ್ ಲಿಯೋ ಡೇಸ, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಅನೆಟ್ ಅಣ್ಣ ಚಾರ್ಲಿ ನಿರೂಪಿಸಿ, ರಿವಾನಿಯಾ ಶಾನ್ವಿ ಸ್ವಾಗತಿಸಿ, ಅಭಿಗೆಲ್ ಧನ್ಯವಾದವನ್ನು ಸಮರ್ಪಿಸಿದರು.

p>

LEAVE A REPLY

Please enter your comment!
Please enter your name here