ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ
ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್ ಇವರು ದೀಪ ಬೆಳಗಿ ಉದ್ಘಾಟಿಸಿದರು.

ವಿದ್ಯಾರ್ಥಿಗಳಿಂದ ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಹಲವು ಉಪಯುಕ್ತ ಯೋಗಾಸನಗಳ ಪ್ರದರ್ಶನ ಹಾಗೂ ಅವುಗಳ ಪ್ರಯೋಜನಗಳ ಕುರಿತು ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಶಾಲಾ ಸೇವಾ ಸಮಿತಿಯ ಕಾರ್ಯದರ್ಶಿ ಶ್ಯಾಮ್ ಪ್ರಸಾದ್ ಇವರು ಹಾಗು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹುನೈದ 9ನೆಯ ತರಗತಿ ಇವರು ಸ್ವಾಗತಿಸಿದರು, ಗೌರಿ 9ನೇ ತರಗತಿ ಇವರು ಧನ್ಯವಾದವಿತ್ತರು. ಪ್ರಮಿತ್ 10ನೇ ಹಾಗೂ ಸಹನ 9ನೇ ತರಗತಿ ಇವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here