ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ

0

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಉದ್ಘಾಟಿಸಿದರು. ವಿದ್ಯಾರ್ಥಿಗಳು ವಿವಿಧ ಆಸನಗಳನ್ನು ಪ್ರದರ್ಶಿಸಿದರು.ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಸದಸ್ಯರಾದ ಯೋಗೀಶ್ ಶಾಹಿನಾ, ಸಂಜೀವ, ಆಶಾ ಕಾರ್ಯಕರ್ತೆ ಜಯಂತಿ, ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಿಜಿಟಿ ಶಿಕ್ಷಕ ಸುರೇಶ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here