ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ ಆಯ್ಕೆ

0

ಬಳಂಜ: ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನೇತಾಜಿ ನಗರ ಸುಮಾರು ಹತ್ತು ಹಲವು ವರ್ಷಗಳಿಂದ ಸಮಾಜ ಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸಂಸ್ಥೆಯಾಗಿದೆ.

ಇದರ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ, ಉಪಾಧ್ಯಕ್ಷರಾಗಿ ಪ್ರಕಾಶ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಹಾಕೋಟೆ ಹಾಗೂ ಕೋಶಾಧಿಕಾರಿಯಾಗಿ ಜಗದೀಶ್ ರೈ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕ್ಲಬ್ ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here