ಜೂ.30: ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡ ಉದ್ಘಾಟನೆ

0

ಉಜಿರೆ: ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡ ಜೂ.30ರಂದು ಉದ್ಘಾಟನೆಗೊಳ್ಳಲಿದೆ. ಉದ್ಘಾಟನಾ ಸಮಾರಂಭವು ಶ್ರೀ ಕೃಷ್ಣಾನುಗ್ರಹ ಸಭಾಭವನಸಭಾ ಭವನದಲ್ಲಿ ನಡೆಯಲಿದೆ.

ದೀಪ ಪ್ರಜ್ವಲನೆಯನ್ನು ಉಜಿರೆ ಶ್ರೀ ಜನಾರ್ದನದ ಆನುವಂಶಿಕ ಆಡಳಿತ ಮೋಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ಮಾಡಲಿದ್ದಾರೆ. ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದ.ಕ.ಲೋಕಸಭಾ ಸದಸ್ಯ ಬ್ರೆಜೇಶ್ ಚೌಟ, ಉಡುಪಿ, ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್, ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್, ಗೌರವ ಉಪಸ್ಥಿತಿಯಲ್ಲಿ ಮಹಿಳಾ ಮಂಡಲದ ಗೌರವಾಧ್ಯಕ್ಷೆ ಸರಸ್ವತಿ ಎನ್.ರಾಜ್., ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಗ್ರಾ.ಪಂ. ಪಿ ಡಿ ಒ., ಪ್ರಕಾಶ್ ಶೆಟ್ಟಿ ನೊಚ್ಚ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್ ಭಾಗವಹಿಸಲಿದ್ದಾರೆ ಎಂದು ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಜಯ ಶ್ರೀಪ್ರಕಾಶ್, ಕಾರ್ಯದರ್ಶಿ ಗಾಯತ್ರಿ ಶ್ರೀಧರ್, ಕೋಶಾಧಿಕಾರಿ ಪೂರ್ಣಿಮ ಸಂಜೀವ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here