







ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು.
ವೇದಿಕೆಯಲ್ಲಿ ಸೆಲ್ಕೋ ಸಂಸ್ಥೆಯ ಸಿಇಓ ಮೋಹನ್ ಭಾಸ್ಕರ್ ಹೆಗ್ಡೆ, ಮಾತೃಶ್ರೀ ಹೇಮಾವತಿ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.


ಡಾ.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ ಹಾಗೂ ಶ್ರೀ ಕ್ಷೇತ್ರದ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು.
ಸೆಲ್ಕೋ ಸಂಸ್ಥೆಯ ಬೆಳ್ತಂಗಡಿ ವ್ಯವಸ್ಥಾಪಕ ನವೀನ್ ವಂದಿಸಿದರು.









