ವೇಣೂರು: ನವಚೇತನ ಆಂಗ್ಲಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ- ವಿದ್ಯಾರ್ಥಿಗಳಿಗೆ ಅರಣ್ಯ ಸಂರಕ್ಷಣೆಯ ಮಹತ್ವವನ್ನು ತಿಳಿಯಪಡಿಸಿದ ಅರಣ್ಯಾಧಿಕಾರಿ ಸುಬ್ರಮಣ್ಯ ಆಚಾರ್

0

ವೇಣೂರು: ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯಲ್ಲಿ ಜು.5ರಂದು ವನಮಹೋತ್ಸವವನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವೇಣೂರಿನ ವಲಯ ಅರಣ್ಯಾಧಿಕಾರಿಗಳಾದ ಸುಬ್ರಹ್ಮಣ್ಯ ಆಚಾರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಶಾಲಿನಿ ಡಿಸೋಜಾ ಉಪಸ್ಥಿತರಿದ್ದರು. ಸಸಿಗೆ ನೀರನ್ನು ಹಾಕುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಬಳಿಕ ಶಾಲಾ ವಿದ್ಯಾರ್ಥಿನಿಯರು ಪರಿಸರ ಗೀತೆಯನ್ನು ಹಾಡಿದರು. ಮುಖ್ಯ ಅತಿಥಿಗಳಾದ ಸುಬ್ರಹ್ಮಣ್ಯ ಆಚಾರ್ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿ, ಅರಣ್ಯ ಸಂರಕ್ಷಣೆಯ ಮಹತ್ವವನ್ನು ತಿಳಿಸಿಕೊಟ್ಟರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಶಾಲಿನಿ ಡಿಸೋಜಾ ಮಾತನಾಡಿ, ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಶಾಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸುತ್ತಿರುವ ವನಮಹೋತ್ಸವದ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಶಾಲಾ ವಿದ್ಯಾರ್ಥಿನಿ ಮೆಲನಿ ಮೋರಸ್ ವನಮಹೋತ್ಸವ ಆಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿನಿ ಆಯಿಷಾ ಅಸ್ಬ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಆಯಿಷಾ ಸಿಮ್ರಾ ಸ್ವಾಗತಿಸಿ, ಫಾತಿಮತ್ ಸಫಾ ಧನ್ಯವಾದಗೈದರು. ಬಳಿಕ ಶಾಲಾ ಆವರಣದಲ್ಲಿ ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಸಸಿಯನ್ನು ನೆಡುವುದರ ಮೂಲಕ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

LEAVE A REPLY

Please enter your comment!
Please enter your name here