ಕೊಕ್ಕಡ: ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ಜು.11ರಂದು ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಜೀವ ವಿಮಾ ನಿಗಮ ಬೆಳ್ತಂಗಡಿ ಇದರ ಅಭಿವೃದ್ಧಿ ಅಧಿಕಾರಿ ಉದಯ ಶಂಕರ ಜಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಯಕ್ಷದ್ರುವ – ಯಕ್ಷ ಶಿಕ್ಷಣ ತಂಡದ ಗುರುಗಳಾದ ಈಶ್ವರ ಪ್ರಸಾದ್ ನಿಡ್ಲೆರವರು ವಿದ್ಯಾರ್ಥಿಗಳಿಗೆ ಆಶೀರ್ವದಿಸಿದರು.ವೇದಿಕೆಯಲ್ಲಿ ಶಾಲಾ ಆಡಳಿತ ಸಮಿತಿ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಸ್ವಾಗತಿಸಿ, ನಿರೂಪಿಸಿದರು. ಶಾಲೆಯ ಯಕ್ಷಗಾನ ತರಗತಿಯ ನಿಯೋಜಕಿ ಸ್ವಾತಿ ಕೆ.ವಿ ವಂದಿಸಿದರು. ಉದ್ಘಾಟನಾ ಸಮಾರಂಭದ ನಂತರ ಯಕ್ಷಗಾನ ಗುರುಗಳು ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ಹೆಜ್ಜೆ ಅಭ್ಯಾಸ ಮಾಡಿಸಿದರು.
ಹೆಜ್ಜೆ ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳು ಯಕ್ಷ ಗುರುಗಳ, ಉದ್ಘಾಟಕರ, ಸಂಚಾಲಕರ, ಮುಖ್ಯ ಶಿಕ್ಷಕರ ಹಾಗೂ ಮಾತಾಜಿಗಳ ಆಶೀರ್ವಾದ ಪಡೆದರು.