ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಬ್ರಹ್ಮಾನಂದ ಶ್ರೀಗಳ ಚಾರ್ತುಮಾಸ್ಯ ವೃತಾಚಾರಣೆ ಪ್ರಾರಂಭ

0

ಬೆಳ್ತಂಗಡಿ: ಚಾತುರ್ಮಾಸ್ಯ ವ್ರತಾಚರಣೆಯಿಂದ ಅನೇಕ ಉಪಯುಕ್ತತೆಗಳಿದ್ದು, ಇದರಲ್ಲಿ ಧರ್ಮ ಮತ್ತು ಸಾತ್ವಿಕ ಶಕ್ತಿಯ ಜಾಗೃತಿ ಮಹತ್ವದ್ದು ಎಂದು ಧರ್ಮಸ್ಥಳ ಕನ್ಯಾಡಿ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾಸ್ವಾಮೀಜಿಯವರು ಹೇಳಿದರು.

ಅವರು ಜು. 21ರ ಗುರು ಪೌರ್ಣಿಮದಂದು ಕರಿಕಲ್ ಧ್ಯಾನಮಂದಿರದಲ್ಲಿ ಚಾತುರ್ಮಾಸ್ಯ ವ್ರತಾರಂಭದ ಧರ್ಮ ಸಭೆಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು.ಕುದ್ರೋಳಿ ಶ್ರೀ ಗೋಕರ್ಣನಾಥ ಕಾಲೇಜು ಉಪನ್ಯಾಸಕ ಕೇಶವ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು.ಚಾತುರ್ಮಾಸ್ಯ ಸ್ವಾಗತ ಸಮಿತಿಯ ಅಧ್ಯಕ್ಷ ಕೃಷ್ಣಾ ನಾಯ್ಕ ಆಸರಕೇರಿ ಅಧ್ಯಕ್ಷತೆ ವಹಿಸಿದ್ದರು.

ಅಯೋಧ್ಯೆಯ ಕೇಶವದಾಸ ಮಹಾಂತ, ಮಾಜಿ ಶಾಸಕ ಜೆ.ಡಿ. ನಾಯ್ಕ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಂಕನಾಡಿ ಗರೋಡಿ ಅಧ್ಯಕ್ಷ ಚಿತ್ತರಂಜನ್, ಮಂಗಳೂರು ಕಾರ್ಪೋರೇಟರ್ ಕಿರಣ್ ಕುಮಾರ್, ಭಟ್ಕಳ ಗುರುಮಠದ ಅಧ್ಯಕ್ಷ ಅರುಣ ನಾಯ್ಕ, ಶಿರಾಲಿ ಸಾರದಹೊಳೆ ದೇವಸ್ಥಾನದ ಅಧ್ಯಕ್ಷ ಆರ್.ಕೆ.ನಾಯ್ಕ, ಮೊಕ್ತೇಸರ ಸುಬ್ರಾಯ ನಾಯ್ಕ, ಹಿರಿಯ ಮುಖಂಡರಾದ ಎಲ್ ಎಸ್ ನಾಯ್ಕ, ಡಿ.ಬಿ.ನಾಯ್ಕ, ಮೊಗೇರ ಸಮಾಜದ ಅಧ್ಯಕ್ಷ ಅಣ್ಣಪ್ಪ ಮೊಗೇರ, ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನೆ, ಈಶ್ವರ ನಾಯ್ಕ, ಗೋವಿಂದ ನಾಯ್ಕ, ಮಂಜುನಾಥ ನಾಯ್ಕ ಕುಮಟಾ, ವಾಮನ ನಾಯ್ಕ, ಶ್ರೀ ರಾಮ ಕ್ಷೇತ್ರ ಸಮಿತಿ ಬೆಳ್ತಂಗಡಿ ತಾಲೂಕು ಸಂಚಾಲಕ ಜಯಂತ ಕೋಟ್ಯಾನ್, ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲ ಬೈಲು, ಮುಂತಾದವವರು ಉಪಸ್ಥಿತರಿದ್ದರು.

ಅಳ್ವೆಕೋಡಿ ಮಾರಿಜಾತ್ರಾ ಮಹೋತ್ಸವದ ಅಧ್ಯಕ್ಷ ರಾಮಾ ಮೊಗೇರ, ಶ್ರೀರಾಮ ಕ್ಷೇತ್ರ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ ನಾಯ್ಕ ಆಸರಕೇರಿ ಸ್ವಾಗತಿಸಿದರು. ಸ್ವಾಗತ ಸಮಿತಿಯ ಸಂಚಾಲಕ ಕೃಷ್ಣಾ ನಾಯ್ಕ ಪ್ರಥ್ವಿ ವಂದಿಸಿದರು. ಗಂಗಾಧರ ನಾಯ್ಕ, ಪರಮೇಶ್ವರ ನಾಯ್ಕ ನಿರೂಪಿಸಿದರು.

ಧ್ಯಾನಮಂದಿರಕ್ಕೆ ಜಾಗ ನೀಡಿದ ಹಿರಿಯ ಮುಖಂಡ ಎಲ್.ಎಸ್. ನಾಯ್ಕ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಬ್ರಹ್ಮಾನಂದ ಶ್ರೀಗಳ ಪುರಪ್ರವೇಶದ ಮೆರವಣಿಗೆ, ಪಾದಪೂಜೆ ನಡೆಯಿತು.

LEAVE A REPLY

Please enter your comment!
Please enter your name here