ನಿಡ್ಲೆ: ಪ್ರಥಮ ಸುತ್ತಿನ ಗ್ರಾಮ ಸಭೆ

0

ನಿಡ್ಲೆ: ನಿಡ್ಲೆ ಗ್ರಾಮದ ಪ್ರಥಮ ಸುತ್ತಿನ ಗ್ರಾಮಸಭೆ ಇಲ್ಲಿಯ ಸರಕಾರಿ ಪ್ರೌಢ ಶಾಲೆಯಲ್ಲಿ ಪಂಚಾಯತ್ ಅಧ್ಯಕ್ಷೆ ಶ್ಯಾಮಲಾ ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಮಾರ್ಗದರ್ಶಿ ಅಧಿಕಾರಿಯಾಗಿ ಸರಕಾರಿ ವಿಸ್ತರಣ ಪಶು ಆಸ್ಪತ್ರೆ ಬೆಳ್ತಂಗಡಿ ಇಲ್ಲಿಯ ಪಶು ವೈಧ್ಯಾಧಿಕಾರಿ ಡಾ.ವಿಶ್ವನಾಥ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ರುಕ್ಮಯ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ, ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಹಾಗೂ ಪಂಚಾಯತ್ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಇಲ್ಲಿಯ ಹೈ ಸ್ಕೂಲ್ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಸ್ವಾಗತವನ್ನು ಪಿಡಿಒ ದಿನೇಶ್ ಎಂ, ನಿರೂಪಣೆಯನ್ನು ಕೇಶವ ಗೌಡ ಶಿಬಾಜೆ, ವರದಿಯನ್ನು ಪಂಚಾಯತ್ ಸಿಬ್ಬಂದಿ ಮಮತ ನೆರವೇರಿಸಿದರು.

LEAVE A REPLY

Please enter your comment!
Please enter your name here