ಬೆಳ್ತಂಗಡಿ: ಪಶು ಆಸ್ಪತ್ರೆ ಅಂಬ್ಯುಲೆನ್ಸ್ ಶೆಡ್ನಲ್ಲಿ ಮಲಗಿದ್ದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಕಳಸ ಸಮೀಪದ ಹಿರೆಬೈಲು ನಿವಾಸಿ ಸುಮಾರು 37 ವರ್ಷ ಪ್ರಾಯದ ರವಿ ಎಂದು ಗುರುತಿಸಲಾಗಿದೆ.
ಇವರು ಕಳೆದ ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಸಂತೆಕಟ್ಟೆ ಸೇರಿದಂತೆ ಪೇಟೆಯಲ್ಲಿ ರಾತ್ರಿ ಹೊತ್ತು ಮಲಗುತ್ತಿದ್ದರು. ವಿಪರೀತ ಕುಡಿತದ ಚಟ ಹೊಂದಿದ್ದ ಇವರು ಕಳೆದ ರಾತ್ರಿ ಪಶು ಆಸ್ಪತ್ರೆಯ ಪಶು ಅಂಬ್ಯುಲೆನ್ಸ್ ನಿಲ್ಲಿಸುವ ಶೆಡ್ಡಿನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಮೃತದೇಹವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯ ಕೈಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಅಳವಡಿಸಲಾಗಿದ್ದ ಐವಿ ಡ್ರಿಪ್ ಕಂಡು ಬಂದಿದೆ.
p>