ವಿಟಿಯುಗೆ 9ನೇ ರ‍್ಯಾಂಕ್‌ ಪಡೆದ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

0

ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಇಂಜಿನಿಯರಿಂಗ್ ವಿಭಾಗದ ಕೊನೆಯ ಸೆಮಿಸ್ಟರ್ ನಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದುಕೊಂಡ ಪ್ರಸ್ತುತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಹಳೇ ವಿದ್ಯಾರ್ಥಿನಿ ಕುಮಾರಿ ಪ್ರತೀಕ್ಷಾ ಅವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಮತ್ತು ಎಲ್ಲಾ ವಿಭಾಗಗಳ ವಿಭಾಗ ಮುಖ್ಯಸ್ಥರುಗಳು ಮತ್ತು ಕುಮಾರಿ ಪ್ರತೀಕ್ಷಾ ಅವರ ತಾಯಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉದ್ಯೋಗಿ ಹೇಮಾ ಆನಂದ್ ಮತ್ತು ಕಾಲೇಜಿನ ಸಿಬ್ಬಂದಿವರ್ಗ ಮತ್ತು ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here