ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕಾರ್ಗಿಲ್ ದಿನಾಚರಣೆ

0

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 25ನೇ ವರ್ಷದ ಕಾರ್ಗಿಲ್ ದಿನಾಚರಣೆ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ನಿವೃತ್ತ ಯೋಧ ಡಾ.ಗೋಪಾಲಕೃಷ್ಣ ಕಾಂಚೋಡು ತಮ್ಮ ಸೇವಾ ಅವಧಿಯ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಕೊಂಡರು.ಜವಾನ್ ಎಂದರೆ ಜವಾನ ಎಂದಲ್ಲ, ಸಣ್ಣ ಪ್ರಾಯದವನು ಹಾಗೂ ಸಮರ್ಥನು ಎಂದರ್ಥ. ಯುದ್ಧದ ಸಮಯದಲ್ಲಿ ಇರುವಂತಹ ಎಡರು-ತೊಡರುಗಳ ಬಗ್ಗೆ ವಿಸ್ತಾರವಾಗಿ ಹೇಳುತ್ತಾ ವಿದ್ಯಾರ್ಥಿಗಳಿಗೆ ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಸುರೇಶ್.ಕೆ ವಹಿಸಿದ್ದರು. ಅಧ್ಯಾಪಕ ಚಂದ್ರಶೇಖರ್ ಭಟ್ ಪ್ರಾಸ್ತವಿಕ ನುಡಿಗಳೊಂದಿಗೆ ಅತಿಥಿಗಳನ್ನು ಪರಿಚಯಿಸಿದರು.

ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಿದ್ಯಾರ್ಥಿಗಳಾದ ಭುವನೇಶ್ ಸ್ವಾಗತಿಸಿ, ಹಸೀಬಾ ಕಾರ್ಯಕ್ರಮ ನಿರೂಪಣೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here