ಬೆಳ್ತಂಗಡಿ: ಮಳೆ ಹಾನಿ ಪ್ರದೇಶಕ್ಕೆ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

0

ಬೆಳ್ತಂಗಡಿ: ಬೆಳ್ತಂಗಡಿ ಮಳೆ ಹಾನಿ ಪ್ರದೇಶಕ್ಕೆ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆ.2ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮದ್ದಡ್ಕ ಸಮೀಪದ ಪಡಂಗಡಿ, ಪೊಯ್ಯಗುಡ್ಡೆ ಸಂಪರ್ಕ ರಸ್ತೆ ಕುದ್ರೆಂಜ ಎಂಬಲ್ಲಿ ಸಂಪರ್ಕ ರಸ್ತೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಲಾಯಿಲ, ಗುರುವಾಯನಕೆರೆ ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆನಂದ್ ಕೆ., ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here