ಬಳಂಜ: ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮ ಸಭೆ

0

ಬಳಂಜ: ಬಳಂಜ ಗ್ರಾಮ ಪಂಚಾಯತ್ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಅಧ್ಯಕ್ಷತೆಯಲ್ಲಿ ಆ.5ರಂದು ಬಳಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ವಿವಿಧ ಅಧಿಕಾರಿಗಳು ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿ, ವಾರ್ಡ್ ಸಭೆಗಳಲ್ಲಿ ಬಂದ ಪ್ರಸ್ತಾವನೆಗಳನ್ನು ಓದಿದರು.ಸಿಬ್ಬಂದಿ ಶಶಿಕಲಾ ವರದಿ ವಾಚಿಸಿದರು.

LEAVE A REPLY

Please enter your comment!
Please enter your name here