ಬೆಂಗಳೂರು: ನಟ ವಿಜಯ ರಾಘವೇಂದ್ರರ ಪತ್ನಿ, ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಕ್ಷಿತ್ ಶಿವರಾಂರವರ ಸಹೋದರಿ ಸ್ಪಂದನಾ ವಿಜಯ ರಾಘವೇಂದ್ರ ನಿಧನರಾಗಿ ಇಂದಿಗೆ ಆ.06 ಕ್ಕೆ ಒಂದು ವರ್ಷವಾಗಿದೆ.
ಈ ಹಿನ್ನಲೆಯಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಂದೆ ಬಿ.ಕೆ.ಶಿವರಾಂರವರ ಮನೆಯಲ್ಲಿ ಒಂದು ವರ್ಷದ ಪುಣ್ಯಸ್ಮರಣೆ ಕಾರ್ಯ ನೆರವೇರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳ ಜೊತೆ ಸ್ಪಂದನಾರಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
p>