ಬಂದಾರು: ಕೋಳಿ ಅಂಕಕ್ಕೆ ಧರ್ಮಸ್ಥಳ ಠಾಣಾ ಪೊಲೀಸರ ದಾಳಿ- ಐವರ ವಿರುದ್ಧ ಕೇಸು ದಾಖಲು

0

ಬೆಳ್ತಂಗಡಿ: ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಧರ್ಮಸ್ಥಳ ಪೊಲೀಸ್‌ ಠಾಣಾ ಉಪ ನಿರೀಕ್ಷಕ ಕಿಶೋರ್ ಪಿ. ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ದೇವಪ್ಪ, ಉಮ್ಮನ ಗೌಡ, ಪರಮೇಶ್ವರ, ರಾಮಣ್ಣ ಮತ್ತು ಬಾಲಕೃಷ್ಣ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇವರಿಂದ ಒಟ್ಟು 5410 ರೂಪಾಯಿ, 3 ಹುಂಜ ಕೋಳಿಗಳು,‌ ಕೋಳಿ ಅಂಕಕ್ಕೆ ಬಳಸುವ 2 ಕತ್ತಿಗಳನ್ನು ಹಾಗೂ ಸ್ಥಳದಲ್ಲಿದ್ದ 4 ದ್ವಿಚಕ್ರ ವಾಹನಗಳನ್ನು ಸ್ವಾಧೀನ ಪಡೆಸಿಕೊಂಡಿದ್ದಾರೆ.

ನ್ಯಾಯಾಲಯದಿಂದ ಅನುಮತಿ ಪಡೆದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 58/2024ರಂತೆ ಕಲಂ 87 ಕರ್ನಾಟಕ ಪೊಲೀಸ್‌ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here