ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ಪಿಲ್ಯ: ತೆಂಕಕಾರಂದೂರು ಸಂತ ರಫಾಯೆಲ್ ಹಿ.ಪ್ರಾ. ಶಾಲೆಯಲ್ಲಿ ನಡೆದ ಪ್ರಾಥಮಿಕ ವಿಭಾಗದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಬಿಭಿನಾಝ್ ಮತ್ತು ಫಾತಿಮಾ ಸಲ್ವಾ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ಅಶೋಕ್ ರವರು ತರಬೇತಿ ನೀಡಿರುತ್ತಾರೆ.

ಇವರಿಗೆ ಶಾಲಾ ಸಂಚಾಲಕ ನಸೀರ್ ಅಹಮದ್ ಖಾನ್, ಮುಖ್ಯೋಪಾಧ್ಯಾಯ ಮೇಲ್ವಿನ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಾಜಿ ಕುರಿಯನ್, ಉಪಾಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಕರು ಸಂಪೂರ್ಣ ಪ್ರೋತ್ಸಾಹ ನೀಡಿರುತ್ತಾರೆ.

LEAVE A REPLY

Please enter your comment!
Please enter your name here