ಧರ್ಮಸ್ಥಳದಲ್ಲಿ ಪುಸ್ತಕಗಳ ಲೋಕಾರ್ಪಣೆ, ರಾಜ್ಯ ಮಟ್ಟದ ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

0

ಧರ್ಮಸ್ಥಳ: ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಧ.ಮ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಯೋಜನೆ ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ 2024 ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಮತ್ತು ರಾಜ್ಯ ಮಟ್ಟದ ಅಂಚೆ – ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭ ಆ.10ರಂದು ಧರ್ಮಸ್ಥಳ ಮಹೋತ್ಸವ ಸಭಾ ಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಿದ್ದರು.ಹಾವೇರಿ ಶ್ರೀ ಹುಕ್ಕೇರಿ ಮಠದ ಶ್ರೀ ನಿರಂಜನ ಪ್ರಣವಸ್ವರೂಪಿ ಸದಾಶಿವ ಮಹಾ ಸ್ವಾಮೀಜಿ ಪುಸ್ತಕಗಳ ಲೋಕಾರ್ಪಣೆ ಮಾಡಿದರು. ಚಲನಚಿತ್ರ ಚಿತ್ರ ನಟ, ಸಂಗೀತ ನಿರ್ದೇಶಕ, ಗಾಯಕ ಅರ್ಜುನ್ ಜನ್ಯ, ದ.ಕ. ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ, ಶ್ರೀ ಧ.ಮ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಭಾಗವಹಿಸಿದ್ದರು.

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ.ಐ.ಶಶಿಕಾಂತ್ ಜೈನ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಲ್ಪಾಡಿತ್ತಾಯ, ವಂದಿಸಿದರು.ಶಿಕ್ಷಕ ಗಣೇಶ್ ಕಾರ್ಕಳ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಕುಂಚ ಗಾನ ನೃತ್ಯ ವೈಭವ, ಸ್ಪರ್ಧಾ ವಿಜೇತರಿಗೆ ಪುರಸ್ಕಾರ ನಡೆಯಿತು.

LEAVE A REPLY

Please enter your comment!
Please enter your name here