ಉಜಿರೆ: ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 8ನೇ ತರಗತಿಯ ಪೋಷಕರ ಸಭೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಯ ಜನಾರ್ಧನ ತೋಳ್ಪಾಡಿತ್ತಾಯ ಇವರು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಈ ಶಾಲೆಯಲ್ಲಿ ರುವ ಸೌಲಭ್ಯಗಳ ಬಗ್ಗೆ ಎನ್.ಸಿ.ಸಿ. ಅಟಲ್ ಟಿಂಕರಿಂಗ್ ಲ್ಯಾಬ್, ವಾಚನಾಲಯ, ಕಂಪ್ಯೂಟರ್ ಲ್ಯಾಬ್ ಆಟದ ಮೈದಾನ ನುರಿತ ಶಿಕ್ಷಕ ವೃಂದ ಎಲ್ಲಾ ವ್ಯವಸ್ಥೆಗಳು ನಮ್ಮಲ್ಲಿ ಇದೆ. ಕನ್ನಡ ಮಾಧ್ಯಮ ಎನ್ನುವ ಕೀಳರಿಮೆ ಬೇಡ, ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದರೆ ಯಾವೆಲ್ಲಾ ಸೌಲಭ್ಯಗಳು ಸರಕಾರದಿಂದ ಸಿಗುತ್ತದೆ, ಮುಂದಿನ ವಿದ್ಯಾಭ್ಯಾಸಕ್ಕೆ, ಉದ್ಯೋಗಕ್ಕೆ ಅನುಕೂಲವಾಗುತ್ತದೆ ಎನ್ನುವ ಕಿವಿಮಾತನ್ನು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಪೋಷಕರಿಗೆ ಮಕ್ಕಳ ಬಗ್ಗೆ ಕಾಳಜಿ ತೋರಿಸಿ ಪ್ರತಿನಿತ್ಯ ಅವರ ಚಟುವಟಿಕೆಗಳನ್ನು ಗಮನಿಸಿ ಎಂದರು.
ಅಧ್ಯಾಪಕ ವಿಶ್ವನಾಥ್ ಪ್ರಾಸ್ತವಿಕ ನುಡಿಗಳೊಂದಿಗೆ ಅತಿಥಿಗಳನ್ನು ಪರಿಚಯಿಸಿದರು.ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. 8ನೇ ತರಗತಿ ವಿದ್ಯಾರ್ಥಿಗಳಾದ ಸಮ್ಯಕ್ ಜೈನ್ ಸ್ವಾಗತಿಸಿ, ರಾಕೇಶ್ ವಂದಿಸಿದರು ಸಿಂಚನ ಕಾರ್ಯಕ್ರಮ ನಿರೂಪಣೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.