


ಧರ್ಮಸ್ಥಳ: ಮೂಡಂಗಲ್ ಫ್ರೆಂಡ್ಸ್ ಬಳಗದ ಆಶ್ರಯದಲ್ಲಿ ಆ.11ರಂದು ಧರ್ಮಸ್ಥಳದಲ್ಲಿ ಆಯೋಜಿಸಿದ “ಕೆಸರ್‌ಡ್ ಒಂಜಿ ದಿನ” ಕಾರ್ಯಕ್ರಮವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ.ಶೆಟ್ಟಿ ಉದ್ಘಾಟಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಸಂಘಟಿತರಾಗಿ ಆಯೋಜಿಸುವ ಇಂತಹ ಕಾರ್ಯಕ್ರಮಗಳಿಂದ ಪರಸ್ಪರ ಪ್ರೀತಿ-ವಿಶ್ವಾಸ, ಆತ್ಮೀಯತೆ ಹೆಚ್ಚಾಗಿ ಸಾಮಾಜಿಕ ಸಾಮರಸ್ಯ ಮೂಡಿಬರುತ್ತದೆ ಎಂದು ಎ.ವಿ.ಶೆಟ್ಟಿ ಹೇಳಿದರು.


ದೈಹಿಕ ಮತ್ತು ಮಾನಸಿಕ ಆರೋಗ್ಯವರ್ಧನೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಹೇಳಿದ ಅವರು ಎಲ್ಲಾ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು.
ದೇವಸ್ಥಾನದ ಪಾರುಪತ್ಯಗಾರ್ ಲಕ್ಷ್ಮಿನಾರಾಯಣ್ ರಾವ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ, ವಕೀಲರಾದ ಕೇಶವ ಬೆಳಾಲ್, ಧನಕೀರ್ತಿ ಆರಿಗ, ಮುರಳಿಧರ ದಾಸ್, ಹರ್ಷ ಜೈನ್ ಮತ್ತು ಗದ್ದೆಯ ಮಾಲಕ ಕೃಷ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.


            






