ಬೆಳ್ತಂಗಡಿ: ಸಂತ ತೆರೇಸಾ ಸಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಮಹಾಸಭೆ

0

ಬೆಳ್ತಂಗಡಿ: ಸಂತ ತೆರೇಸಾ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯನ್ನು ಆ.10ರಂದು ಹಮ್ಮಿಕೊಳ್ಳಲಾಯಿತು. ಪ್ರಾರ್ಥನಾ ನೃತ್ಯದೊಂದಿಗೆ ಪ್ರಾರಂಭಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಅರ್ಸುಲೈನ್ ಫ್ರಾನ್ಸಿಸ್ಕನ್ ಆಡಳಿತ ಮಂಡಳಿಯ ಉಪ ಕಾರ್ಯದರ್ಶಿಯಾದ ವಂದನೀಯ ಭಗಿನಿ ಜುಲಿಯಾನ ಪಾಯ್ಸ್ ರವರು ಆಗಮಿಸಿದ್ದು ಹೆತ್ತವರಿಗೆ ತಮ್ಮ ಮಕ್ಕಳ ಬಗ್ಗೆ ಹಾಗೂ ದಾಂಪತ್ಯದ ಬಗ್ಗೆ ಇರಬೇಕಾದ ಕಾಳಜಿ ಹೇಗೆ ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ ಎಂದು ವಿವರಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂತ ತೆರೇಸಾ ಕಾನ್ವೆಂಟಿನಾ ಸುಪೀರಿಯರ್ ಭಗಿನಿ ಜೆಸಿಂತಾ ಬರೆಟ್ಟೋ, ಸಂತ ತೆರೇಸಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಭಗಿನಿ ಲೀನಾ ಡಿಸೋಜಾ ಹಾಗೂ 2023 24 ನೇ ಸಾಲಿನ ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷ ಜೋಸೆಫ್ ಕೆ ಜೇ ಆಗಮಿಸಿದ್ದು ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಆರೋಗ್ಯರವರು ಹಾಗೂ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾಕ್ಟರ್ ಹೆರಾಲ್ಡ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾಕ್ಟರ್ ಹೆರಾಲ್ಡ್ ರವರು ಆಗಮಿಸಿರುವ ಗಣ್ಯರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.

ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿಯಾದ ಕನ್ನಡ ವಿಭಾಗದ ಉಪನ್ಯಾಸಕಿ ಝಿಟಾರವರು 202324ನೇ ಸಾಲಿನ ವರದಿಯನ್ನು ವಾಚಿಸಿ ಆಂಗ್ಲ ವಿಭಾಗದ ಉಪನ್ಯಾಸಕಿ ಕುಮಾರಿ ನ್ಯಾನ್ಸಿ ಸಿಕ್ವೇರಾ ರವರ ಸಹಕಾರದೊಂದಿಗೆ 2024 25 ನೇ ಸಾಲಿನ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಮುಂದಿನ ಶೈಕ್ಷಣಿಕ ವರ್ಷಕ್ಕೆ ಸಿಲ್ವಿಯ ಮೋನಿಸ್ ರವರು ಉಪಾಧ್ಯಕ್ಷರಾಗಿ ಆಯ್ಕೆಯಾದರು.2023-24ನೇ ಶೈಕ್ಷಣಿಕ ವರ್ಷದಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಆರೋಗ್ಯರವರು ಕಾಲೇಜಿನ ನಿಯಮಾವಳಿಗಳನ್ನು ಹೆತ್ತವರಿಗೆ ಮನದಟ್ಟು ಮಾಡಿದರು. ವಿದ್ಯಾರ್ಥಿಗಳು ಕಾಲೇಜಿನ ನಿಯಮಗಳ ಪ್ರಕಾರ ನಡೆಯುವಂತೆ ನೋಡಿಕೊಳ್ಳಬೇಕಾಗಿ ಹೆತ್ತವರಲ್ಲಿ ವಿನಂತಿಸಿದರು.

ಹಿಂದಿ ವಿಭಾಗದ ಉಪನ್ಯಾಸಕಿ ಸುನಿತಾ ಡಿಸೋಜ ರವರು ಕಾರ್ಯಕ್ರಮವನ್ನು ನಿರೂಪಿಸಿ, ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಪ್ರದೀಪ್ ಜೋನ್ ಪಿಂಟೋ ರವರು ವಂದಿಸಿದರು.  ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು. ಎಲ್ಲಾ ವಿದ್ಯಾರ್ಥಿಗಳ ಹೆತ್ತವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here