ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

0

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ ಸಾಧನ ಪ್ರಶಸ್ತಿಗೆ ಒಂಭತ್ತನೆ ಭಾರಿಗೆ ಆಯ್ಕೆಯಾಗಿರುತ್ತದೆ.

2023-24ನೇ ಸಾಲಿನಲ್ಲಿ ಸಹಕಾರ ಸಂಘವು 41709 ಸದಸ್ಯತನದೊಂದಿಗೆ, ರೂ.188.78 ಕೋಟಿ ಠೇವಣಿ, ರೂ.155.63 ಕೋಟಿ ಸಾಲ, ರೂ.212.24 ಕೋಟಿ ದುಡಿಯುವ ಬಂಡವಾಳದೊಂದಿಗೆ ರೂ.3.84 ಕೋಟಿ ನಿವ್ವಳ ಲಾಭ ಗಳಿಸಿರುತ್ತದೆ. 2023-24ನೇ ಸಾಲಿನಲ್ಲಿ ರೂ.1128 ಕೋಟಿ ವ್ಯವಹಾರ ನಡೆಸಿರುತ್ತದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಮಾಜಿಕ ಚಟುವಟಿಕೆಗಳನ್ನು ತನ್ನನ್ನು ತಾನು ತೊಡಗಿಸಿಕೊಂಡಿದೆ. ಸ್ವಂತ ಕೇಂದ್ರ ಕಚೇರಿ ಸುಮಾರು 5 ಕೋಟಿ ಮೊತ್ತದ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ 13-07-2024ರಂದು ಲೋಕರ್ಪಣೆಗೊಂಡಿದ್ದು ಇದರ ಎರಡನೇ ಮಡಿಯಲ್ಲಿ ಆಡಳಿತ ಕಚೇರಿಯನ್ನು ಹೊಂದಿರುತ್ತದೆ.

2023-24ನೇ ಸಾಲಿನಲ್ಲಿ ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಠ ಸಾಧನೆಯನ್ನು ಗಮನಿಸಿ 2023-24ನೇ ಸಾಲಿನ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ ಎಂದು ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷ ಎನ್ ಪದ್ಮನಾಭ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here