ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

0

ಮುಂಡಾಜೆ: ನಶಾ ಮುಕ್ತ ಭಾರತ ಅಭಿಯಾನದ ಪ್ರಯುಕ್ತ ಆ.12ರಂದು ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಅದೇ ರೀತಿ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಎಂಬ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿ ಗಳಿಂದ ಪೋಸ್ಟರ್ ತಯಾರಿಸುವುದು, ಕವನ ರಚನೆ ಮತ್ತು ರೀಲ್ಸ್ ಮಾಡುವುದು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಆ್ಯಂಟಿ ಡ್ರಗ್ಸ್ ಕ್ಲಬ್ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಮಧ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷತೆಯನ್ನು ವಹಿಸಿದರು.

LEAVE A REPLY

Please enter your comment!
Please enter your name here