ನಾವೂರು: ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ನಾವೂರು: ನಾವೂರು: ಗ್ರಾ.ಪಂ. ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಸುನಂದ ನೆರವೇರಿಸಿದರು. ಸರಕಾರಿ ಪ್ರಾಥಮಿಕ ಶಾಲೆಯ ಮತ್ತು ಪ್ರೌಢಶಾಲೆ ವಿದ್ಯಾರ್ಥಿನಿಯರು ರಾಷ್ಟ್ರಭಕ್ತಿ ಗೀತೆಗಳನ್ನು ಹಾಡಿದರು. ನಿವೃತ್ತ ಪ್ರಾಂಶುಪಾಲ ಆಂಟನಿ ಟಿ.ಪಿ ಇವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ಬಗ್ಗೆ ಮತ್ತು ದೇಶದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಮತ್ತು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಗೌರವಿಸಲಾಯಿತು.ಸದ್ರಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ದ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಊರಿನ ಗೌರವಾನ್ವಿತ ಗಣ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು/ ಪದಾಧಿಕಾರಿಗಳು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು/ ಪದಾಧಿಕಾರಿಗಳು, ಅಧ್ಯಾಪಕರು, ಶಾಲಾ ಮಕ್ಕಳು, ಪಂಚಾಯಿತಿ ಪಂಚಾಯತ್ ಅಭಿವದ್ದಿ ಅಧಿಕಾರಿ, ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.

LEAVE A REPLY

Please enter your comment!
Please enter your name here