ಬೆಳ್ತಂಗಡಿ: ಸಂತ ತೆರೇಸಾ ಪ್ರೌಢ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.ಧ್ವಜಾರೋಹಣವನ್ನು ಜಿಲ್ಲಾ ಕೆ ಡಿ ಪಿ ಸದಸ್ಯ ನೋಟರಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೆರವೇರಿಸಿದರು.
ಅವರು ಭಾರತ ಮಾತೆಯ ಮಕ್ಕಳಾದ ನಾವೆಲ್ಲ ಎಂದಿಗೂ ಪರಸ್ಪರರ ಧರ್ಮ, ಭಾಷೆ ಹಾಗೂ ಸಂಸ್ಕೃತಿಯನ್ನು ಗೌರವಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಸಾಮರಸ್ಯದಿಂದ ಬಾಳಿದರೆ ಮಾತ್ರ ನಾವು ಶತ್ರುಗಳನ್ನು ಸೆದೆಬಡಿಯಲು ಸಾಧ್ಯವಿದೆ. ಅಲ್ಲದೇ ನಮ್ಮ ಪೂರ್ವಜರು ನಮಗೆ ಸ್ವಾತಂತ್ರ್ಯವನ್ನು ತಂದುಕೊಟ್ಟಿರುವುದು ನಾವು ಧರ್ಮಕ್ಕಾಗಿ , ಭಾಷೆಗಾಗಿ ಹೋರಾಡಲಿ ಎಂದಲ್ಲ. ಬದಲಾಗಿ ಭಾರತದಲ್ಲಿ ಒಗ್ಗಟ್ಟಿನಿಂದ ಬಾಳಲಿ ಎಂದಾಗಿದೆ. ಹೀಗಾಗಿ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸಿನ ಭಾರತ ನಿರ್ಮಿಸಲು ಒಂದಾಗಬೇಕಿದೆ. ಸ್ವಾತಂತ್ರ್ಯ ದಿನವಾದ ಇಂದು ನಾವು ದೇಶದಲ್ಲಿ ಏಕತೆ, ಶಾಂತಿ ಹಾಗೂ ಅಭಿವೃದ್ಧಿಯನ್ನು ಸಾಧಿಸಲು ಒಂದಾಗಿ ಪ್ರತಿಜ್ಞೆ ತೊಡೋಣ ಎಂದು ನುಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ, ಪಿಯೂಸಿ ಕಾಲೇಜಿನ ಪ್ರಾಚಾರ್ಯರಾದ ಸಿಸ್ಟೆರ್, ಪಿಟಿಎ ಉಪಾದ್ಯಕ್ಷರಾದ ಜಗನ್ನಾಥ ಪುತ್ರಬೈಲು, ಹಳೆ ವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾದ ನಾರಾಯಣ ಶೆಟ್ಟಿ ಉಪಸ್ಥಿರಿದ್ದರು.