ಸುರ್ಯ ದೇವಸ್ಥಾನದ ವತಿಯಿಂದ ಮಕ್ಕಳಿಗೆ ಸಮವಸ್ತ್ರ, ಪ್ರೋತ್ಸಾಹಧನ ವಿತರಣೆ

0

ಉಜಿರೆ:  ಬೆಳ್ತಂಗಡಿ ತಾಲೂಕು ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿಗಳ 159 ಮಕ್ಕಳು ಮತ್ತು  87 ಮಂದಿ ಶಾಲಾ  ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಆ.15ರಂದು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು ಅವರು ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪ್ರೋತ್ಸಾಹಧನ ವಿತರಿಸಿದರು.

ವೇದಿಕೆಯಲ್ಲಿ ಸಂಗ್ರಾಮ್ ಸುರ್ಯಗುತ್ತು, ಬಿ.ರಾಜಶೇಖರ ಅಜ್ರಿ, ಬಿ.ಮುನಿರಾಜ ಅಜ್ರಿ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಇಂದಬೆಟ್ಟು ವಲಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ನಾಗವೇಣಿ, ನಡ ಗ್ರಾ.ಪಂ ಅಧ್ಯಕ್ಷೆ ಮಂಜುಳಾ ರತ್ನಾಕರ್, ಗ್ರಾ.ಪಂ.ಸದಸ್ಯರುಗಳಾದ ಸುಕೇಶ್ ಪೂಜಾರಿ, ಪ್ರವೀಣ್.ವಿ ಜಿ, ಶಶಿಕಲಾ ಜೈನ್, ಸುಮಿತ್ರಾ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here