ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಳದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವೃತ

0

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಧ.ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು, ಸ್ವ ಸಹಾಯ ಒಕ್ಕೂಟಮತ್ತು ಜ್ಞಾನ ವಿಕಾಸ ಕೇಂದ್ರಗಳ ಆಶ್ರಯದಲ್ಲಿ 32ನೇ ಸಾಮೂಹಿಕ ವರಮಹಾಲಕ್ಷ್ಮಿ ವೃತ ಆರಂಭಗೊಂಡು ಸುಮಾರು 150ಕ್ಕಿಂತ ಹೆಚ್ಚು ಮಹಿಳೆಯರು ವೃತದಲ್ಲಿ ಭಾಗಿಯಾದರು.

ಮದ್ಯಾಹ್ನ ಮಹಾಪೂಜೆ ನಂತರ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು.

ಈ ಸಂದರ್ಭದಲ್ಲಿ ದೇವಳದ ಅರ್ಚಕರು, ಯೋಜನಾಧಿಕಾರಿ ಸುರೇಂದ್ರ ವಲಯ ಮೇಲ್ವಿಚಾರಕಿ ಶಶಿಕಲಾ ತಾಲೂಕು ಜನಜಾಗೃತಿ ಸದಸ್ಯರಾದ ಚೆನ್ನಪ್ಪ ಗೌಡ, ಪೆರ್ಲ ಮತ್ತು ಶಿಬಾಜೆ ಒಕ್ಕೂಟಗಳ ಅಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಸೇವಾಪ್ರತಿನಿಧಿ ಅರುಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here