ಕೊಯ್ಯೂರು: ಬೆಳ್ತಂಗಡಿ ತಾಲೂಕು ನಿವೃತ್ತ ಅರೆಸೇನಾ ಪಡೆಗಳ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜ್ ನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಸಿ ಆರ್ ಪಿ ಎಫ್ ಯೋಧ ಮಂಜಪ್ಪ ರವರು ಅರೆಸೇನಾ ಪಡೆಗಳ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಸೇನೆಗೆ ಸೇರುವುದಕ್ಕೆ ಕರೆ ನೀಡಿದರು. ಬಿ ಎಸ್ ಎಫ್ ಮಾಜಿ ಯೋಧ ಲಕ್ಷ್ಮಣ ಗೌಡ ಜಿ.ಡಿ. ‘ಕಾರ್ಗಿಲ್ ದಿನಗಳು ‘ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸಂಘದ ಅಧ್ಯಕ್ಷ ರಾದ ಸೂರಪ್ಪ ಗೌಡ ಸೇನೆಗೆ ಸೇರಿದಾಗ ಸಿಗುವ ಸವಲ ತ್ತುಗಳ ಬಗ್ಗೆ ವಿವರಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಬೆರ್ಕೆ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ವೇದಿಕೆಯಲ್ಲಿ ನಿವೃತ್ತ ಅರೆಸೇನಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಮೋಹನ ಗೌಡ ವಹಿಸಿ ಕೊಂಡಿದ್ದರು.ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೋಕೇಶ್ ಪಾoಬೇಲು, ಹೇಮಾವತಿ, ಇಸುಬು ಭಾಗವಹಿಸಿದ್ದರು.
ವಿದ್ಯಾರ್ಥಿನಿಯರಾದ ಪ್ರಜ್ಞಾ, ಭವ್ಯ, ಪ್ರಮಿತ, ಕವಿತಾ, ನಿಶ್ಮಿತಾ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಭವ್ಯಸ್ವಾಗತಿಸಿ,ಅರ್ಥಶಾಸ್ತ್ರ ಉಪನ್ಯಾಸಕಿ ತೃಪ್ತಿ ಪಿ. ಜಿ. ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಣೆ ಗೈದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಪ್ರೀತಿ ಬಹುಮಾನಗಳ ಪಟ್ಟಿ ವಾಚಿಸಿದರು. ಕನ್ನಡ ಉಪನ್ಯಾಸಕಿ ರಶ್ಮಿದೇವಿ ಸಹಕರಿಸಿದರು. ಧ್ವಜಾರೋಹಣ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿಕೊಟ್ಟರು.