ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

1

ಬೆಳ್ತಂಗಡಿ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ ಆ.17ರಂದು ನಡೆಯಿತು.ಚೆಸ್ ಪಂದ್ಯಾಟವನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್ ಉದ್ಘಾಟಿಸಿದರು.

ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸ್ವಾಗತಿಸಿದರು.

ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸುಜಯ, ತಾಲೂಕು ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ ಕಾರ್ಯದರ್ಶಿ ರಮೇಶ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಳ್ತಂಗಡಿಯ ಅಧ್ಯಕ್ಷ ಕೃಷ್ಣಾನಂದ ರಾವ್, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ರವಿರಾಜ್ ಗೌಡ ಹಾಗೂ ಉಪಾಧ್ಯಕ್ಷ‌ ಪಂಚಾಕ್ಷರಪ್ಪ, ಎಸ್.ಡಿ.ಎಂ ಬೆಳ್ತಂಗಡಿಯ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಚೆಸ್ ಆಟಗಾರ ಶಾಬ್ದಿಕ್ ವರ್ಮಾ ಇವರನ್ನು ಸನ್ಮಾನಿಸಲಾಯಿತು.ಗೇರುಕಟ್ಟೆ ಶಾಲೆಯ ದೈಹಿಕ ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿ, ಎಸ್ ಡಿ ಎಂ ಬೆಳ್ತಂಗಡಿಯ ಶಿಕ್ಷಕ ಶ್ರೇಯಾಂಸ್ ಜೈನ್ ವಂದಿಸಿದರು.

1 COMMENT

LEAVE A REPLY

Please enter your comment!
Please enter your name here