ಬೆಳ್ತಂಗಡಿ: ಪಂಚಾಯತ್ ಸಿಬ್ಬಂದಿಗಳ ನವಂಬರ್ ತಿಂಗಳಿಂದ ನಡೆಯುವ ಹೋರಾಟದ ಬಗ್ಗೆ ಜಿಲ್ಲಾಮಟ್ಟದ ಸಮಾಲೋಚನೆ ಸಭೆಯು ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ದೇವಿ ಪ್ರಸಾದ್ ಬೊಲ್ಮರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡುವಂತೆ ರಾಜ್ಯಾದಾದ್ಯಂತ ಹೋರಾಟ ನಡೆಯಲಿದ್ದು, ಈ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾಯಿತು.
ಜಿಲ್ಲೆಯ ವಿವಿಧ ತಾಲೂಕಿನ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.