
ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ, ಮತ್ತು ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ
170ನೇ ಗುರುಜಯಂತಿ, ಸಂಘದ ಗೌರವಾಧ್ಯಕ್ಷರಾಗಿದ್ದ ಮಾಜಿ ಶಾಸಕ ದಿ|ಕೆ.ವಸಂತ ಬಂಗೇರರವರಿಗೆ ಹಾಗೂ ಮಾಜಿ ಉಪಾಧ್ಯಕ್ಷರಾಗಿದ್ದ ದಿ। ಶೇಖರ ಬಂಗೇರ ಹೇರಾಜೆಯವರಿಗೆ ನುಡಿ ನಮನ, ಸಮಾಜದ ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಆ.20ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾ ಭವನದಲ್ಲಿ ಜರಗಿತು.
ಬೆಳಿಗ್ಗೆ ಕಲಶ ಪೂಜೆ, ಗಣಹೋಮ, ಗುರುಗಳ ವಾರ್ಷಿಕ ವರ್ಧಂತ್ಯುತ್ಸವ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಗುರು ಮಹಾಪೂಜೆ, ಭಜನಾ ಕಾರ್ಯಕ್ರಮ ನಡೆಯಿತು.ನಂತರ ನಡೆದ ಸಭಾ ಕಾರ್ಯಕ್ರಮದ
ಉದ್ಘಾಟನೆಯನ್ನು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರು, ಯುವ ಬಿಲ್ಲವ ವೇದಿಕೆಯ ಸ್ಥಾಪಕ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ವಹಿಸಿದ್ದರು, ಪ್ರಧಾನ ಭಾಷಣಗಾರರಾಗಿ ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಾಯನ ಕೇಂದ್ರದ ಅಧ್ಯಕ್ಷ ಪ್ರೊ.ತುಕಾರಾಮ ಪೂಜಾರಿ ಭಾಗವಹಿಸಿ ನುಡಿ ನಮನ ಸಲ್ಲಿಸಿದರು.ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ.ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಸಂಘದ ನಿಕಟ ಪೂರ್ವ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಸಂಘದ ಕೋಶಾಧಿಕಾರಿ ಪ್ರಶಾಂತ್ ಕುಮಾರ್ ಕೊಕ್ರಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವಿಕಾರ, ವಿದ್ಯಾರ್ಥಿ ವೇತನ ವಿತರಣೆ ನಡೆಯಿತು. ಸಂಘದ ಮಾಜಿ ಅಧ್ಯಕ್ಷರುಗಳು, ನಿರ್ದೇಶಕರು, ಗ್ರಾಮ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ನಿತೇಶ್ ಹೆಚ್. ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಪ್ರಜ್ಞಾ ಓಡಿಲ್ನಾಳ ನಿರೂಪಿಸಿದರು.