ಬೆಳ್ತಂಗಡಿ: ಆಟೋ ಚಾಲಕರ ಮತ್ತು ಮಾಲಕರ ಸಂಘ ಸುರ್ಯ ಉಜಿರೆ ಇದರ ವತಿಯಿಂದ ಆಟಿಡೊಂಜಿ ದಿನ ಹಾಗೂ ಸಾರ್ವಜನಿಕರ ಕ್ರೀಡಾಕೂಟ ಆ.18ರಂದು ಸುರ್ಯ ದೇವಸ್ಥಾನದ ವಠಾರದಲ್ಲಿ ನಡೆಯಿತು. ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ರಾಜೇಶ್ ಗೌಡ ಉಜಿರೆ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಂಶುಪಾಲ ಟಿ.ಕೆ. ಶರತ್ ಕುಮಾರ್ ಮಂಚಿಬೆಟ್ಟು ಉಜಿರೆ, ಸುರ್ಯ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯ, ಸಹಶಿಕ್ಷಕಿ ಶೋಭಾ ಮತ್ತು ಅಂಗನವಾಡಿ ಕಾರ್ಯಕರ್ತೆ ಗೀತಾ ಭಾಗವಹಿಸಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಅಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ರಾಜೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು.
ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು, ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ನಡ ಗ್ರಾ.ಪಂ. ಅಧ್ಯಕ್ಷೆ ಮಂಜುಳಾ ಮತ್ತು ಬೆಳ್ತಂಗಡಿ ಬಿಎಂಎಸ್ ಅಧ್ಯಕ್ಷ ಕೃಷ್ಣ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಬೆಳಿಗ್ಗೆಯಿಂದ ಸಂಜೆಯವರೆಗೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಕ್ರೀಡಾಕೂಟ ನಡೆಸಿ ಪ್ರಶಸ್ತಿ ವಿತರಿಸಲಾಯಿತು. ಸಂಘದ ಗೌರವಾಧ್ಯಕ್ಷ ಗಣೇಶ್ ಗೌಡ, ಉಪಾಧ್ಯಕ್ಷ ಅರುಣಾಕರ ಗೌಡ, ಕಾರ್ಯದರ್ಶಿ ದಿನೇಶ್ ಗೌಡ, ಜತೆ ಕಾರ್ಯದರ್ಶಿ ಸುಕೇಶ್ ಪೂಜಾರಿ ಮತ್ತು ಕೋಶಾಧಿಕಾರಿ ಜಗದೀಶ್ ಗೌಡ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.