ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

0

ಉಜಿರೆ: ಆರನೇ ತರಗತಿಯಿಂದ 9ನೇ ತರಗತಿವರೆಗೆ ಕಲಿಯುತ್ತಿರುವ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಬಗ್ಗೆ ಆಸಕ್ತಿ ಮೂಡಿಸುವುದಕ್ಕಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅಂಚೆ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಪುತ್ತೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಅರ್ಜಿಯನ್ನು ಇದೆ ಸೆಪ್ಟೆಂಬರ್ 3ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಪುತ್ತೂರು ವಿಭಾಗ, ಪುತ್ತೂರು-574201 ಇವರಿಗೆ ತ್ವರಿತ ಅಂಚೆ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು.ಕಳೆದ ಬಾರಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 60 ಕ್ಕಿಂತ ಅಧಿಕ ಅಂಕಗಳನ್ನು ಪಡೆದವರು ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಛೇರಿಯಿಂದ ಪಡೆಯಬಹುದು ಎಂದು ಅಂಚೆ ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here