ಕಾಯರ್ತಡ್ಕದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ರಾಜ್ಯ ಮಟ್ಟದ ಕರಾಟೆಯಲ್ಲಿ ಚಿನ್ನದ ಪದಕ

0

ಉಜಿರೆ: ಆಗಸ್ಟ್ 17ರಂದು ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಕಾಯರ್ತಡ್ಕದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅಡ್ಲಿನ್ ಎಲಿಜಬೆತ್ ಜೆರಿನ್ ರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು.ಇವರು ಕಾಯರ್ತಡ್ಕದ ನಿವಾಸಿಯಾದ ಜೆರಿನ್ ಹಾಗು ಝಾನ್ಸಿ ದಂಪತಿಯ ಪುತ್ರಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here