ಆರಂಬೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಆರಂಬೋಡಿ: ಆರಂಬೋಡಿ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.23ರಂದು ಗುಂಡೂರಿ ತುಂಬೆದಲ್ಕೆ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ.ಸ್ಮೃತಿ ಯು ಸ್ವಾಗತಿಸಿ, ಹಿಂದಿನ ಗ್ರಾಮ ಸಭೆಯ ಅನುಪಾಲನಾ ವರದಿ ವಾಚಿಸಿದರು.

ಪಂಚಾಯತ್ ಉಪಾಧ್ಯಕ್ಷೆ ತೇಜಸ್ವಿನಿ, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾಕರ್ತರು, ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here