ಕನ್ಯಾಡಿ-2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನ

0

ಕನ್ಯಾಡಿ-2: ಚಂದ್ರಮಾನ-3 ಮಿಷನ್ ನ ಯಶಸ್ಸಿನ ಸ್ಮರಣಾರ್ಥ “ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ” ಯನ್ನು ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ” ವನ್ನು ಆಚರಿಸಲಾಯಿತು.

2023 ಆಗಸ್ಟ್ 23ರಂದು ವಿಕ್ರಮ್ ಲ್ಯಾಂಡರ್ ನ್ನು ಚಂದ್ರನ ಮೇಲ್ಮೈ ಮೇಲೆ ಯಶಸ್ವಿಯಾಗಿ ಇತಿಳಿಸಲಾಗಿತ್ತು. ಈ ಮೂಲಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ದೇಶವೆಂಬ ಹೆಗ್ಗಳಿಕೆ ಗಳಿಸಿತ್ತು .ಅಲ್ಲದೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶ ಭಾರತವೆಂಬ ಅಭಿದಾನಕ್ಕೂ ಪ್ರಾಪ್ತವಾಗಿತ್ತು.

ಇದರ ಪ್ರಯುಕ್ತ ಮಕ್ಕಳಿಂದ ಈ ದಿನದ ವಿಷೇಶತೆ ಕುರಿತು ಮಾಹಿತಿ ಚಿತ್ರ ಕಲೆ ಮತ್ತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಹತ್ತು ತಂಡಗಳಲ್ಲಿ ತಲಾ ಎರಡು ತಂಡಗಳು ಪ್ರಥಮ ಮತ್ತು ದ್ವಿತೀಯ ಬಹುಮಾನ ಗಳಿಸಿದರು.ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಮಕ್ಕಳ ಸಹಭಾಗಿತ್ವದಲ್ಲಿ ಆಚರಿಸಲಾಯಿತು.

p>

LEAVE A REPLY

Please enter your comment!
Please enter your name here