

ಬೆಳ್ತಂಗಡಿ: ಬೆಳಾಲು ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ(83ವ)ರವರನ್ನು ಆ.20ರಂದು ಅವರ ಮನೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಆರೋಪದಲ್ಲಿ ಆ.24ರಂದು ಧರ್ಮಸ್ಥಳ ಠಾಣಾ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ(54ವ) ಮತ್ತು ಆತನ ಮಗ ಮುರಳಿಕೃಷ್ಣ(21ವ)ರವರನ್ನು ಆ.27ರಂದು ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕೊಲೆಗೀಡಾದ ಬಾಲಕೃಷ್ಣ ಬಡೆಕ್ಕಿಲಾಯರ ಮಗಳು ವಿಜುಲಕ್ಷ್ಮಿ ಅವರ ಪತಿ ರಾಘವೇಂದ್ರ ಕೆದಿಲಾಯ ಮತ್ತು ಮಗ ಮುರಳಿಕೃಷ್ಣ ಆಸ್ತಿ ಮತ್ತು ಚಿನ್ನಾಭರಣಕ್ಕಾಗಿ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದರೂ ಪ್ರಕರಣದ ಕೂಲಂಕುಶ ತನಿಖೆ ನಡೆಸಬೇಕಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಏಳು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದು ನ್ಯಾಯಾಧೀಶರು ಆರೋಪಿಗಳನ್ನು ಆ.31ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ.