







ವೇಣೂರು: ವೇಣೂರು ಗ್ರಾಮ ಪಂಚಾಯತಿನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.30ರಂದು ವೇಣೂರು ಹೊಸ ಬಸ್ ತಂಗುದಾಣದ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಿತು.
ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ ಮಾರ್ಗದರ್ಶಿಯಾಗಿ ಗ್ರಾಮ ಸಭೆ ಮುನ್ನಡೆಸಿದರು.



ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ್ ಎನ್., ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.
ಪಂಚಾಯತ್ ಕಾರ್ಯದರ್ಶಿ ವನಜ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್ ಅನುಪಾಲನಾ ವರದಿ ವಾಚಿಸಿದರು.ಲೆಕ್ಕ ಸಹಾಯಕ ರಾಜು ಲೆಕ್ಕ ಪತ್ರ ಓದಿದರು. ಸಿಬ್ಬಂದಿ ನಾರ್ಣಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು.ಸಿಬ್ಬಂದಿಗಳು ಸಹಕರಿಸಿದರು.









