ಕಳೆಂಜ: 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ

0

ಕಳೆಂಜ: 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಕಾಯರ್ತಡ್ಕ ಶಾಲೆಯ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷೆ ಗಿರಿಜರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಮುಖ್ಯ ಪಶು ವೈದ್ಯಾಧಿಕಾರಿ, ಸಂಚಾರಿ ಮತ್ತು ವಿಸ್ತರಣೆ ಪಶು ಆಸ್ಪತ್ರೆ ಬೆಳ್ತಂಗಡಿ ಇಲ್ಲಿಯ ಡಾ.ವಿಶ್ವನಾಥ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತ ಕಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ ಕೆ, ಕಾರ್ಯದರ್ಶಿ ಹೊನ್ನಪ್ಪ ಗೌಡ ಎಂ, ಪಂಚಾಯತ್ ಸಿಬ್ಬಂದಿ ಉಮೇಶ್, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯ ಶ್ರೀಧರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ವಾಗತವನ್ನು ಪಂಚಾಯತ್ ಸದಸ್ಯರಾದ ಗಂಗಾಧರ್, ಅನುಪಾಲನ ವರದಿಯನ್ನು ಪಿಡಿಒ ಹೊನ್ನಮ್ಮ ವಾಚಿಸಿದರು. ಜಮಾ ಖರ್ಚು ವಿವರವನ್ನು ಪಂಚಾಯತ್ ಸಿಬ್ಬಂದಿ ರಾಜೇಶ್ ವಾಚಿಸಿದರು.ಪಂಚಾಯತ್ ಸಿಬ್ಬoದಿಗಳಾದ ರಾಜೇಶ್ ಶೆಟ್ಟಿ, ಹರೀಶ್, ಗೀತಾ ಗ್ರಾಮಸಭೆಗೆ ಸಹಕರಿಸಿದರು.

LEAVE A REPLY

Please enter your comment!
Please enter your name here