


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಆ.29ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.
ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಅವರು ಆಗಮಿಸಿದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ ವಹಿಸಿಕೊಂಡರು. ಮುಖ್ಯ ಅತಿಥಿ ಅವರು ಧ್ಯಾನ್ಚಂದ್ರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೆದರು ಹಾಗೂ ಎಲ್ಲಾ ಶಿಕ್ಷಕರು ಧ್ಯಾನ್ ಚಂದ್ರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವವನ್ನು ಸಲ್ಲಿಸಿದರು.


ಮುಖ್ಯ ಅತಿಥಿಯಾದ ರಮೇಶ್ ರವರು ಧ್ಯಾನ್ ಚಂದ್ರ ಬಗ್ಗೆ ವಿದ್ಯಾರ್ಥಿಗಳಿಗೆ ಅವರ ಸಾಧನೆ ಬಗ್ಗೆ ಹೇಳಿದರು. ಕ್ರೀಡಾ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ತಮ್ಮ ತೊಡಗಿಸಿಕೊಳ್ಳಿ ಎಂದು ಹೇಳಿದರು. ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಜಯಶ್ರೀ ಅವರು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಶುಭಾಶಯಗಳು ವಿದ್ಯಾರ್ಥಿಗಳಿಗೆ ತಿಳಿಸಿದರು.
ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ವಿದ್ಯಾರ್ಥಿಗಳಾದ ಸ್ಪೂರ್ತಿ 10ನೇ ತರಗತಿ ಕಾರ್ಯಕ್ರಮ ಸಂಯೋಜಿಸಿದರು ಹಾಗೂ ಕೌಶಲ್ಯ 10ನೇ ತರಗತಿ ಸ್ವಾಗತಿಸಿದರು.ಕ್ರೀಡಾ ನಾಯಕ ಅಜಯ್ ಧ್ಯಾನ್ ಚಂದ್ರ ಬಗ್ಗೆ ಮಾತನಾಡಿದರು. ಕೊನೆಗೆ ಪ್ರತೀಕ್ 9ನೇ ತರಗತಿ ಎಲ್ಲರಿಗೂ ಧನ್ಯವಾದ ಹೇಳಿದರು. ಶಾಲಾ ಶಿಕ್ಷಕರ ಹಾಗೂ ಸಿಬ್ಬಂದಿಗಳು ಭಾಗವಹಿಸಿದರು.









