ಉಜಿರೆ: ಪ್ರತಿಯೊಬ್ಬರು ವೃತಿ ಜೀವನದಲ್ಲಿ ತಮ್ಮದೇ ಆದ ಶಿಸ್ತು ಅನ್ನು ಅಳವಡಿಸಿಕೊಂಡರೆ ಯಶಸ್ಸು ಕಾಣಬಹುದು ಜೊತೆಗ ದುರಭ್ಯಾಸಗಳಿಂದ ಸಹ ದೂರ ಇರುಬೇಕು. ಹಾಗೂ ಕ್ಷೌರಿಕ ವೃತಿಯಲ್ಲಿ ಹೊಸ ಬದಲಾವಣೆಗಳು ಆಗುತ್ತಿದೆ ಅದನ್ನು ಆಳವಡಿಸಿಕೊಂಡು ನಮ್ಮ ವೃತ್ತಿ ಬಗ್ಗೆ ಹೆಮ್ಮೆ ಇರಬೇಕು.ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರುಡ್ ಸೆಟ್ ಸಂಸ್ಥೆಯಲ್ಲಿ ಅತ್ಯತ್ತಮವಾದ ಸೌಲಭ್ಯಗಳೊಂದಿಗೆ ಉಚಿತ ತರಬೇತಿ ನೀಡಿ ಸವಿತಾ ಸಮಾಜದ ಹುಡುಗರಿಗೆ ಅನುಕೂಲ ಮಾಡಿದ್ದಾರೆ ಅವರಿಗೆ ಕೃತಜ್ಞತೆಯನ್ನು ನೀವೇ ಸ್ವ-ಉದ್ಯೋಗಿಗಳಾಗಿ ಯಶಸ್ಸು ಕಾಣುವುದರಾ ಮೂಲಕ ಸಲ್ಲಿಸಬೇಕೆಂದು ರಾಯಚೂರು ಮಾಜಿ ರಾಜಸಭಾ ಸದಸ್ಯರಾದ ದಿವಗಂತ ಅಶೋಕ್ ಗಸ್ತಿಯವರ ಪತ್ನಿ ಸುಮಾ ಅಶೋಕ್ ಗಸ್ತಿ ಅಭಿಪ್ರಾಯಪಟ್ಟರು.
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ ಮೆನ್ಸ್ ಪಾರ್ಲರ್ ಸಲೂನ್ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಮಾತನಾಡಿದರು.ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.ಸಮಾರಂಭದಲ್ಲಿ ಅತಿಥಿಯಾಗಿದ್ದ ರಾಘವೇಂದ್ರ ಇಟಗಿ, ನಿರ್ದೇಶಕರು, ಕರ್ನಾಟಕ ರಾಜ್ಯ ಸವಿತಾ ಸಮಾಜ, ಇವರು ಮಾತನಾಡಿ ವೃತಿಯನ್ನು ಹೊಸತನ ಇಟ್ಟುಕೊಂಡು ಮುಂದುವರೆಯಿರಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿದರು ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕ ರವಿ ಕುಮಾರ್ ಕಡೂರು ಉಪಸ್ಥಿತರಿದ್ದರು.
ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯರವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. ಸುಮಾರು 32 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು, ವೀರೇಶ, ಬಳ್ಳಾರಿ ಪ್ರಾರ್ಥನೆ ಮಾಡಿದರು, ಪ್ರಭಾಕರ್, ವರಪ್ರಸಾದ್ ತರಬೇತಿಯ ಅನುಭವ ಹಂಚಿಕೊಂಡರು.