ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ವಲಯ ಮಟ್ಟದ ಪ್ರೌಢಶಾಲಾ ಕಬಡ್ಡಿ ಪಂದ್ಯಾಟ

0

ಬೆಳ್ತಂಗಡಿ: ರಝಾಗಾರ್ಡನ್ ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 3ರಂದು ಬೆಳ್ತಂಗಡಿ ವಲಯ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಯಶಸ್ವಿಯಾಗಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷಜನಾಬ್ ಸಯ್ಯದ್ ಹಬೀಬ್ ಇವರು ವಹಿಸಿಕೊಂಡಿದ್ದರು.

ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಸಯ್ಯದ್ ಅಯ್ಯುಬ್ , ಬಂಗಾಡಿ ವಲಯ ಸಂಪನ್ಮೂಲ ವ್ಯಕ್ತಿ ರಮೇಶ್, ಬೆಳ್ತಂಗಡಿ ವಲಯ ಕ್ರೀಡಾ ಸಂಯೋಜಕಿ ಕುಮದಶ್ರೀ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಜಾಕಿನ್ ಬಿನ್ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಜನಾಬ್ ಸಯ್ಯದ್ ಹಬೀಬ್ ಇವರು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯನಿಯವರು ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಶಾಲಾ ಸಹ ಶಿಕ್ಷಕಿ ಶ್ವೇತಾ ಇವರು ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಂದರ್ ನಾಯ್ಕ್ ಇವರು ಧನ್ಯವಾದ ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು. ಈ ಕ್ರೀಡಾ ಕೂಟದ ಫಲಿತಾಂಶವಾಗಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮುಂಡಾಜೆ ಪ್ರೌಢಶಾಲೆ ಮತ್ತು ದ್ವಿತೀಯ ಸ್ಥಾನವನ್ನು ಸರಕಾರಿ ಪದವಿಪೂರ್ವ ಕಾಲೇಜ್ ಬೆಳ್ತಂಗಡಿ ಇಲ್ಲಿಯ ಪ್ರೌಢಶಾಲಾ ಬಾಲಕರು ಪಡೆದುಕೊಂಡರು.

ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ಕೊಯ್ಯೂರು ಮತ್ತು ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ನಾವೂರು ಇವರು ಪಡೆದುಕೊಂಡರು.

LEAVE A REPLY

Please enter your comment!
Please enter your name here